ಅಕೌಂಟಿಂಗ್ ಹಾಗೂ ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಮೇ 2ರಿಂದ 30 ದಿನಗಳ ಕಂಪ್ಯೂಟರ್ ಅಕೌಂಟಿಂಗ್ (ಟ್ಯಾಲಿ) ಹಾಗೂ ಯುವತಿಯರಿಗೆ ಮೇ 5ರಿಂದ 30 ದಿನಗಳ ಮಹಿಳಾ ಹೊಲಿಗೆ ಉಚಿತ ತರಬೇತಿ ಆಯೋಜಿಸಿದೆ.

ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವಕರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಏ.30ರೊಳಗಾಗಿ ಸ್ವ ವಿವರಗಳೊಂದಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net