ಶಿವಶರಣ ನುಲಿಯ ಚಂದಯ್ಯನವರ ಜಯಂತ್ಯುತ್ಸವ

19 HVR 8
Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಕೊರಮರ ಸಂಘದ ಸಹಯೋಗದಲ್ಲಿ ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಕಾಯಕಯೋಗಿ ಶಿವಶರಣ ಶ್ರೀ ನುಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಕಾರ್ಯಕ್ರಮ ಉದ್ಘಾಟಿಸಿ, ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಹಾವೇರಿ ಸರ್ಕಾರಿ ಪದವಿಪೂರ್ವ ಕಾಲೇಜ್ ಉಪನ್ಯಾಸಕ ಈಶ್ವರ ಕೊರಗರ ನುಲಿಯ ಚಂದಯ್ಯನವರ ಜೀವನದ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ದೇವಗಿರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭಾಕರ ಪಾರಿಗಂಟಿ, ಪದವಿ ಪೂರ್ವ ಶಿಕ್ಷಣ ಇಾಖೆ ಉಪನಿರ್ದೇಶಕ ಡಾ.ಎಚ್.ಉಮೇಶಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಜಿಲ್ಲಾ ಕೊರಮರ ಸಂಘದ ಅಧ್ಯಕ್ಷ ವೆಂಕಟೇಶ ಬಿಜಾಪುರ, ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net