ಅಗರಬತ್ತಿ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗೆ ಅ.21ರಿಂದ 10 ದಿನಗಳ ಅಗರಬತ್ತಿ ತಯಾರಿಕೆ ತರಬೇತಿ ಆಯೋಜಿಸಿದೆ.
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ತಮ್ಮ ಸ್ವ ವಿವರಗಳೊಂದಿಗೆ ಅ.19ರೊಳಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net