ಕೃಷಿ ಭಾಗ್ಯ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Former
Published on

ಹಾವೇರಿ: ಜಿಲ್ಲೆಯಾದ್ಯಂತ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟ ಸುಧಾರಿಸುವುದರೊಂದಿಗೆ, ಬರ ಉಪಶಮನದ ಗುರಿ ಹೊಂದಿರುವ ಕೃಷಿಭಾಗ್ಯ ಯೋಜನೆಯಡಿ ಸಹಾಯಧನಕ್ಕಾಗಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಿದೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ತಿಳಿಸಿದ್ದಾರೆ.
ಈ ಯೋಜನೆಯನ್ನು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಮಳೆ ನೀರು ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆಗಾಗಿ ಈ ಯೋಜನೆ ಅಡಿ ಬದು ನಿರ್ಮಾಣ, ಕೃಷಿಹೊಂಡ, ತಂತಿ ಬೇಲಿ, ಪಾಲಿಥೀನ ಹೊದಿಕೆ, ಡೀಸೆಲ್ ಪಂಪಸೆಟ್ ಮತ್ತು ತುಂತುರು ನೀರಾವರಿ ಘಟಕಗಳನ್ನು ರೈತರು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಈ ಘಟಕಗಳಿಗೆ ಸಹಾಯ ಧನ ಲಭ್ಯವಿರುತ್ತದೆ.
ಆಸಕ್ತ ರೈತರು ದಿನಾಂಕ ಸೆಪ್ಟೆಂಬರ್ 5ರೊಳಗಾಗಿ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದೆಂದು ಜೆಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net