ಹಾವೇರಿ: ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಂದ ಸರ್ಕಾರದ ಸೌಲಭ್ಯಗಳು ಮತ್ತು ಬೆಳೆ ಪರಿಹಾರ ಪಡೆದುಕೊಳ್ಳಲು ರೈತರು ಫ್ರೂಟ್ಸ್ ಐಡಿ ಹೊಂದಿರುವುದು ಅವಶ್ಯಕವಾಗಿದೆ. ಜಂಟಿ ಖಾತೆ ಹೊಂದಿದ ಎಲ್ಲ ರೈತರು ಸಹ ಪ್ರತ್ಯೇಕವಾಗಿ ಫ್ರೂಟ್ಸ್ ಐಡಿ ಪಡೆದುಕೊಳ್ಳಬಹುದು.
ಹಾಗಾಗಿ, ಫ್ರೂಟ್ಸ್ ಐಡಿ ಹೊಂದಿರದ ರೈತರು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಹಾಗೂ ಉತಾರ ದಾಖಲಾತಿಗಳೊಂದಿಗೆ ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತುರ್ತಾಗಿ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬೇಕು. ಈಗಾಗಲೇ ಫ್ರೂಟ್ಸ್ ಐಡಿ ಹೊಂದಿದ ರೈತರಿಗೂ ಸಹ ಬಾಕಿ ಇರುವ ಸರ್ವೇ ನಂಬರ್‌ಗಳನ್ನು ಸೇರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.