ಆಹಾರ ಸಂಸ್ಕರಣೆ ಅರಿವು ಕಾರ್ಯಕ್ರಮ ನಾಳೆ

Published on

ಹಾವೇರಿ: ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯದಿಂದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಕುರಿತು ಜು.10ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ.

ಹೊಸದಾಗಿ ಆರಂಭಿಸಲು ಇಚ್ಛಿಸುವ ಆಸಕ್ತ ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಡಾ.ಕೆ.ಮಲ್ಲಿಕಾರ್ಜುನ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net