ತಂಡ ಮುಂಗಾರು ಬೆಳೆ ಸಮೀಕ್ಷೆ

Published on

ಹಾವೇರಿ: ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಸಂಭಂದಿತ ಇಲಾಖೆಗಳ ಸಹಯೋಗದೊಂದಿಗೆ 2024-25ನೇ ಸಾಲಿನ ತಡಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕೈಗೊಳ್ಳಲು ಅ.25 ಕೊನೆಯ ದಿನಾಂಕವಾಗಿದೆ.

ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆವಿಮೆ ಇತ್ಯರ್ಥಪಡಿಸಲು, ಬೆಳೆನಷ್ಟ ಪರಿಹಾರ ನೀಡಲು, ಬೆಂಬಲ ಬೆಲೆ ಯೋಜನೆಯಡಿ ಉತ್ಪನ್ನಗಳನ್ನು ಖರೀದಿಸಲು ಮತ್ತು ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಒದಗಿಸಲು ಹಾಗೂ ಜಮೀನಿನ ಉತಾರದಲ್ಲಿ ಬೆಳೆ ವಿವರ ನಮೂದಿಸಲು ಬಳಸಲಾಗುತ್ತದೆ. ರೈತರು ಸ್ವತಃ ತಾವೇ ತಮ್ಮ ಹೊಲದ ಬೆಳೆಯ ಬೆಳೆ ಸಮೀಕ್ಷೆಯನ್ನು ರೈತರ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಮಾಡಬಹುದಾಗಿದೆ. ಪ್ರತಿ ಗ್ರಾಮಕ್ಕೆ ನಿಯೋಜಿಸಲಾದ ತರಬೇತಿ ಹೊಂದಿದ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಬಹುದು. ರೈತರು ಅಥವಾ ಖಾಸಗಿ ನಿವಾಸಿಗಳು ದಾಖಲಿಸಿದ ಬೆಳೆ ವಿವರಗಳನ್ನು ತಾಲೂಕು ತಹಸೀಲ್ದಾರ್ ನಿಯೋಜಿಸಿದ ಬೆಳೆ ಸಮೀಕ್ಷೆ ಮೇಲ್ವಿಚಾರಕರಿಂದ ಪರಿಶೀಲಿಸಿ ದೃಢೀಕರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕ ಮಾಡಬಹುದೆಂದು ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net