ಏಡ್ಸ್ ಜಾಗೃತಿಗಾಗಿ ಕ್ಯಾಂಡಲ್ ಜಾಥಾ

1 HVR 6
Published on

ಹಾವೇರಿ: ಜಿಲ್ಲಾ ಆರೋಗ್ಯ ಇಲಾಖೆ ಏಡ್ಸ್ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಕ್ಯಾಂಡಲ್ ಜಾಥಾಕ್ಕೆ ಶುಕ್ರವಾರ ನಗರದ ಪುರಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಚಾಲನೆ ನೀಡಿದರು.
ನಗರದ ಪುರಸಿದ್ದೇಶ್ವರ ದೇವಸ್ಥಾನ ಅವರಣದಿಂದ ಆರಂಭವಾದ ಏಡ್ಸ್ ಜಾಗೃತಿ ಕ್ಯಾಂಡಲ್ ಜಾಥಾ, ಮಹಾತ್ಮಾ ಗಾಂಧೀ ವೃತ್ತ, ಹೊಸಮನಿ ಸಿದ್ದಪ್ಪ ವೃತ್ತ, ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೈಲಾರ ಮಹದೇವಪ್ಪ ವೃತ್ತದಲ್ಲಿ ಮುಕ್ತಾಯಗೊಂಡಿತು.
ಜಿಲ್ಲಾ ಅರೋಗ್ಯಾಧಿಕಾರಿ ಡಾ.ರಾಘವೇಂದ್ರ ಎಚ್.ಎಸ್., ಜಿಲ್ಲಾ ಏಡ್ಸ್ ರೋಗ ನಿಯಂತ್ರಣಾಧಿಕಾರಿ ಡಾ.ನಿಲೇಶ, ಜಿಲ್ಲಾ ಲೈಂಗಿಕ ಅಲ್ಪಸಂಖ್ಯಾತರ ಸಂಘಟನೆಯ ಅಧ್ಯಕ್ಷೆ ಅಕ್ಷತಾ ಎಚ್.ಎಸ್., ಎ.ಆರ್‌ಟಿ ವೈದ್ಯಾಧಿಕಾರಿ ಡಾ.ಜಯಲಕ್ಷ್ಮೀ, ತಾಲೂಕು ವೈದ್ಯಾಧಿಕಾರಿ ಡಾ. ಪ್ರಭಾಕರ ಕುಂದೂರು, ಮಂಜು ಹಟ್ಟಿ, ಸತೀಶ ಹೊಸಮನಿ, ಜಿಲ್ಲಾ ಏಡ್ಸ್ ನಿಯಂತ್ರಣ ಕಚೇರಿ ಸಿಬ್ಬಂದಿ, ಜಿಲ್ಲೆಯ ಇತರ ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net