ಕಾಲೇಜು ವಿದ್ಯಾರ್ಥಿಗಳಿಗೆ ಇ-ಕ್ವಿಜ್ ಸ್ಪರ್ಧೆ ನಾಳೆ

Published on

ಹಾವೇರಿ: ಅಂತಾರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ಆ.9ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್ ಮೂಲಕ ಇ-ಕ್ವಿಜ್ ಸ್ಪರ್ಧೆ ಆಯೋಜಿಸಲಾಗಿದೆ.
17ರಿಂದ 25 ವರ್ಷದೊಳಗಿನವರು ಭಾಗವಹಿಸಬಹುದು. ಆಸಕ್ತ ವಿದ್ಯಾರ್ಥಿಗಳು https://forms.gle/Fphe2KsSzZZ UbfpL8 ಗೂಗಲ್ ಲಿಂಕ್ ಬಳಸಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ವಿದ್ಯಾರ್ಥಿಗಳಿಗೆ ಎಚ್.ಐ.ವಿ/ಏಡ್ಸ್ ಬಗ್ಗೆ ಅರಿವು ಮೂಡಿಸಲು ಈ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ 3,000 ರೂ., ದ್ವಿತೀಯ ಬಹುಮಾನ 2,500 ರೂ., ತೃತೀಯ 2,000 ರೂ. ಬಹುಮಾನ ವಿತರಿಸಲಾಗುವುದು.
ಆ.12ರಂದು ಹಾವೇರಿ ನಗರದ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್‌ನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಜಿಲ್ಲಾ ಮಟ್ಟದ ಅಂತಾರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರದೊಂದಿಗೆ ಬಹುಮಾನ ವಿತರಿಸಲಾಗುವುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net