ಮದ್ಯ ಸೇವಿಸಿದ ಅಮಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Boy Suside+1
Published on

ಹಾವೇರಿ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕರ್ಜಗಿ ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ.
ಸವಣೂರ ತಾಲೂಕಿನ ಕಲಕೋಟಿ ಗ್ರಾಮದ ಫಕ್ಕೀರೇಶ ಬಸಪ್ಪ ಸಂಕಮ್ಮನವರ (37) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದಾಗಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಅಲ್ಲದೆ ಮದ್ಯ ಸೇವಿಸಿದ ಅಮಲಿನಲ್ಲಿ ಜಮೀನುವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net