ಅಲೆಮಾರಿ ಸಮುದಾಯಗಳ ಜಾಗೃತಿ ಸಮಾವೇಶ ಮಾ.15ರಂದು

Alemari news (3)
Published on

ಹಾವೇರಿ: ಅಲೆಮಾರಿ ಸಮುದಾಯಗಳ ರಾಜ್ಯಮಟ್ಟದ ಬೃಹತ್ ಜಾಗೃತಿ ಸಮಾವೇಶ ಮಾ.15ರಂದು ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು, ಜಿಲ್ಲೆಯಿಂದಲೂ ಹಲವರು ಭಾಗವಹಿಸುತ್ತಿದ್ದಾರೆ ಎಂದು ಎಸ್‌ಸಿ, ಎಸ್‌ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಆದರ್ಶ ಯಲ್ಲಪ್ಪ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಜಿಲ್ಲೆಯ ಅಲೆಮಾರಿ ಸಮುದಾಯಗಳ ಮುಖಂಡರಿಂದ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಅಲೆಮಾರಿ ಸಮುದಾಯಗಳು ತಮ್ಮ ಹಕ್ಕು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಜಾಗೃತರಾಗುವುದು ಅಗತ್ಯವಾಗಿದೆ. ಬೆಂಗಳೂರಿನಲ್ಲಿ ಜರಗುವ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಸಚಿವರು, ಕೇಂದ್ರ ಹಾಗೂ ರಾಜ್ಯದ ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಲಾಗುವುದು ಎಂದರು.
ಜಿಲ್ಲಾಧ್ಯಕ್ಷ ಶೆಟ್ಟಿ ವಿಭೂತಿ ಮಾತನಾಡಿ, ಅಲೆಮಾರಿ ಸಮುದಾಯಗಳು ಮುಖ್ಯವಾಹಿನಿಗೆ ಬರಬೇಕಾದರೆ ನಾವೆಲ್ಲರೂ ಜಾಗೃತರಾಗಬೇಕಿದೆ ಎಂದರು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಂಜುನಾಥ ದಾಯತ್ಕರ್, ಹುಸೇನಪ್ಪ ಒಂಟೆತ್ತನವರ, ಧರ್ಮಣ್ಣ ಮಹಾಂತ, ಸೋಮಣ್ಣ ಕೂಡಲಗಿ, ಆನಂದ ಭಜಂತ್ರಿ, ವಿನಾಯಕ ಗೋಸಂಗಿ, ರಾಮುಡು ಪೂಸಲ್, ಆನಂದ ಕೂಮಾರಿ, ದುರಗಪ್ಪ ಕಿಳ್ಳಿಕ್ಯಾತರ, ದರ್ಶನ ಒಂಟೆತ್ತನವರ, ಸಣ್ಣಹುಸೇನಪ್ಪ ಹಾನಗಲ್ಲ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net