

ಹಾವೇರಿ: ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸಲು ಆಗ್ರಹಿಸಿ ಅಖಿಲ ಭಾರತ ಶಿಕ್ಷಕರ ಫೆಡರೇಶನ್ ವತಿಯಿಂದ ಹಮ್ಮಿಕೊಂಡಿರುವ ಭಾರತ ಯಾತ್ರೆಯ ಅಂಗವಾಗಿ ಹಾವೇರಿಯ ಗುರು ಭವನದಲ್ಲಿ ಶನಿವಾರ ಆಯೋಜಿಸಿದ್ದ ಶಿಕ್ಷಕರ ಸಮಾವೇಶವನ್ನು ಫೆಡರೇಶನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಉದ್ಘಾಟಿಸಿದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ, ಜಿಲ್ಲಾಧ್ಯಕ್ಷ ಬಿ.ಪಿ.ಬಿದರಿ, ಜಿಲ್ಲಾ ಕಾರ್ಯದರ್ಶಿ ವಿಜಯೇಂದ್ರ ಯತ್ನಳ್ಳಿ, ಇತರರಿದ್ದರು.