ಹಾವೇರಿ: ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದ ದುರಸ್ತಿ ಕಾರ್ಯವನ್ನು ಬುಧವಾರ ಡಿಸಿ ಡಾ.ವಿಜಯಮಹಾಂತೇಶ ದಾನಮ್ಮನವರ ಪರಿಶೀಲಿಸಿದರು. ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಎರಡು ದಿನಗಳಲ್ಲಿ ಅಚ್ಚುಕಟ್ಟಾಗಿ ಕೆಲಸವನ್ನು ಪೂರ್ಣಗೊಳಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ತಿಮ್ಮೇಶಕುಮಾರ ಇತರರಿದ್ದರು.