ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು ಹಾಗೂ ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಹಾಗೂ ಸ್ವಾವಲಂಬಿ ಸಾರಥಿ ಯೋಜನೆ ಸೌಲಭ್ಯಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಪ್ರವರ್ಗ-1ರ 6(ಎ)ಯಿಂದ 6(ಎಕೆ)ವರೆಗೆ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಸೇರಿರಬೇಕು. ಈ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ನವೆಂಬರ್ 2ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಠಿಠಿ://ಞಚಿಜಿಜಚ್ಟಛಿಛ್ಝಿಟಞಛ್ಞಿಠಿ.ಚ್ಟ್ಞಠಿ.ಜಟ.ಜ್ಞಿ ವೆಬ್‌ಸೈಟ್ ಅಥವಾ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ಕಚೇರಿ ಸಂಪರ್ಕಿಸಬಹುದು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net