ಹಾವೇರಿ: ಪೋಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡಲು ಕನಿಷ್ಠ ಮೂರು ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿ ಹೊಂದಿರಬೇಕು. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದು.
ಪ್ರತಿ ಪ್ರಕರಣಕ್ಕೆ ಮೂರು ಸಾವಿರ ರೂ. ಸಂಭಾವನೆ ನಿಗದಿಪಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳ ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜೆ.ಕೆ.ಟವರ್ 3ನೇ ಮಹಡಿ, ಎಂ.ಎಂ.ಸರ್ಕಲ್, ಗೂಗಿಕಟ್ಟಿ ಓಣಿ, ಮಹಿಳಾ ಪೊಲೀಸ್ ಠಾಣೆ ಹತ್ತಿರ, ಹಾವೇರಿ ಈ ವಿಳಾಸದಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ಅ.15ರೊಳಗಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.