ಹಾವೇರಿ: ಜಿಲ್ಲಾ ಮಟ್ಟದಲ್ಲಿ ಅರಣ್ಯ ಹಕ್ಕು ಕೋಶ ಸ್ಥಾಪಿಸಲು ಹಾಗೂ ಅರಣ್ಯ ಹಕ್ಕು ಕೋಶಗಳಲ್ಲಿ ಕಾರ್ಯ ನಿರ್ವಹಿಸಲು ಕೋ ಆರ್ಡಿನೇಟರ್ ಹಾಗೂ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಪದವಿಧರರಾಗಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕೋ ಆರ್ಡಿನೇಟರ್ ಹುದ್ದಗೆ ಐದು ವರ್ಷಗಳ ಕಾರ್ಯ ಅನುಭವ ಹಾಗೂ ಸಹಾಯಕ ಹುದ್ದೆಗೆ ಮೂರು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 31-05-2025ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಳ ಕಚೇರಿ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.