ಅಶ್ವಿನಿನಗರ ಶ್ರೀ ಸಾಯಿಬಾಬಾರ ಗುರುಪೂರ್ಣಿಮೆ ಜು.10ರಂದು

1 Saibaba
Published on

ಹಾವೇರಿ: ಇಲ್ಲಿನ ಅಶ್ವಿನಿನಗರದ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಜು.10ರಂದು ಗುರುಪೂರ್ಣಿಮೆ ಮಹೋತ್ಸವ ಹಾಗೂ ಮಂದಿರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಬೆಳಗ್ಗೆ 6.15ಕ್ಕೆ ಕಾಕಡಾರತಿ, ಕ್ಷೀರಾಭಿಷೇಕ, ಮಹಾಮಂಗಳಾರತಿ, ಬೆಳಗ್ಗೆ 9.45ಕ್ಕೆ ಶ್ರೀ ಸಾಯಿ ಸತ್ಯನಾರಾಯಣ ಪೂಜೆ ಹಾಗೂ ನವಗ್ರಹ ಪೂಜೆ, 10.30ರಿಂದ ಗಣ ಹೋಮ, ದತ್ತಾತ್ರೇಯ ಹೋಮ, ರುದ್ರಹೋಮ ನಂತರ ಪೂರ್ಣಾಹುತಿ ಜರುಗಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4 ಗಂಟೆಗೆ ಭಜನೆ, 6.30ಕ್ಕೆ ಧೂಪಾರತಿ, 7ಕ್ಕೆ ಪಲ್ಲಕ್ಕಿ ಉತ್ಸವ, ನಂತರ ಮಹಾಮಂಗಳಾರತಿಯೊಂದಿಗೆ ಉತ್ಸವ ಸಮಾಪ್ತಿಯಾಗಲಿದೆ ಎಂದು ಶ್ರೀ ಶಿರಡಿ ಸಾಯಿಬಾಬಾ ಸೇವಾ ಸಮಿತಿ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net