ಹಾವೇರಿ ಶ್ರೀ ಶಿರಡಿ ಸಾಯಿಬಾಬಾ ದೇಗುಲದಲ್ಲಿ ಕಾರ್ತಿಕೋತ್ಸವ ಸಂಭ್ರಮ

28 HVR 13
Published on

ಹಾವೇರಿ: ಇಲ್ಲಿನ ಅಶ್ವಿನಿನಗರದ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರುವಾರ ಶ್ರೀ ಶಿರಡಿ ಸಾಯಿಬಾಬಾ ಅವರ ಕಾರ್ತಿಕ ದೀಪೋತ್ಸವ ಸಮಾರಂಭ ವಿಜೃಂಭಣೆಯಿಂದ ಜರುಗಿತು.

ಹರಸೂರ ಬಣ್ಣದ ಮಠದ ಶ್ರೀ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ, ಆಶೀರ್ವಚನೆ ಮಾಡಿದರು. ಅತ್ಯಂತ ಕಡಿಮೆ ಅವಧಿಯಲ್ಲಿ ದೇಗುಲ ನಿರ್ಮಿಸಿ, ಗುರುಪೂರ್ಣಿಮೆ, ಕಾರ್ತಿಕೋತ್ಸವ, ವಾರ್ಷಿಕೋತ್ಸವ ಸೇರಿದಂತೆ ಎಲ್ಲ ಆಚರಣೆಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸುವ ಮೂಲಕ ಭಕ್ತರ ನೆಚ್ಚಿನ ಮಂದಿರವನ್ನಾಗಿ ಪರಿವರ್ತಿಸಿದ ಶ್ರೀ ಶಿರಡಿ ಸಾಯಿಬಾಬಾ ಸೇವಾ ಸಮಿತಿ ಟ್ರಸ್ಟ್ ನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಶ್ರೀಗಳು ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು.

ಕಾರ್ತಿಕ ದೀಪೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರು ಅನ್ನಸಂತರ್ಪಣೆ ಪ್ರಸಾದ ಸ್ವೀಕರಿಸಿ ಪುನೀತರಾದರು. ಟ್ರಸ್ಟ್‌ನ ಅಧ್ಯಕ್ಷರು, ಧರ್ಮದರ್ಶಿಗಳು ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net