ಶ್ರೀ ಸಾಯಿ ಮಂದಿರದ ಪ್ರಥಮ ವಾರ್ಷಿಕೋತ್ಸವ; ದತ್ತಾತ್ರೇಯ ಹೋಮ, ರುದ್ರ ಹೋಮ, ಭಕ್ತರಿಂದ ಕ್ಷೀರಾಭಿಷೇಕ ಆಯೋಜನೆ

Sai baba
Published on

ಹಾವೇರಿ: ಇಲ್ಲಿನ ಅಶ್ವಿನಿ ನಗರದ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಲೋಕಾರ್ಪಣೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭವನ್ನು ಆ.28ರಂದು ಆಯೋಜಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದ 8.30ರವರೆಗೆ ಭಕ್ತರಿಂದ ಸಾಯಿಬಾಬಾರಿಗೆ ಕ್ಷೀರಾಭಿಷೇಕ ನಡೆಯಲಿದೆ. ಬೆಳಗ್ಗೆ 9ಕ್ಕೆ ಮಹಾ ಮಂಗಳಾರತಿ, ಕಳಸ ಪೂಜೆ ಹಾಗೂ ದತ್ತಾತ್ರೇಯ ಹೋಮ, ರುದ್ರ ಹೋಮ, ಪೂರ್ಣಾಹುತಿ ಹಾಗೂ 11.30ಕ್ಕೆ ಮಹಾಮಂಗಳಾರತಿ ನೆರವೇರಲಿದೆ. ನಂತರ ಶ್ರೀ ಸದಾಶಿವ ಸ್ವಾಮೀಜಿಯವರ ಪಾದಪೂಜೆ ಹಾಗೂ ಗಣ್ಯರು, ದಾನಿಗಳಿಗೆ ಗೌರವಾರ್ಪಣೆ, ಸಂಜೆ 4ರಿಂದ ಭಜನೆ, ಸಂಜೆ 6.30ಕ್ಕೆ ಪಾಲಕಿ ಉತ್ಸವ ನಡೆಯಲಿದೆ.
ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಅತಿಥಿಯಾಗಿ ಪಾಲ್ಗೊಳ್ಳುವರು. ಶ್ರೀ ಸಾಯಿ ಸಾಂಸ್ಕೃತಿಕ ಕಲಾ ಸಂಸ್ಥೆ ವತಿಯಿಂದ ಮಧ್ಯಾಹ್ನ 12 ಗಂಟೆಯಿಂದ ಭಕ್ತಿ ಸುಧೆ ಕಾರ್ಯಕ್ರಮ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಶ್ರೀ ಶಿರಡಿ ಸಾಯಿಬಾಬಾ ಸೇವಾ ಸಮಿತಿ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net