

ಹಾವೇರಿ: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಯುಷ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಗುರುಭವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಾಭ್ಯಾಸ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಯೋಗೋತ್ಸವ ಅಂಗವಾಗಿ ಆಯುಷ್ ಅರಿವು, ಜೀವನಶೈಲಿ ಹಾಗೂ ಯೋಗಾಭ್ಯಾಸ ಕುರಿತು ವಿವರವಾಗಿ ಮಾಹಿತಿ ನೀಡಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯಕ್ರಮ ನಿರೂಪಣಾಧಿಕಾರಿ ಅಣ್ಣಪ್ಪ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಜಿ.ಸಿ.ನಿಡಗುಂದಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಆಯುಷ್ ಇಲಾಖೆ ಸಹಾಯಕ ಆಡಳಿತಾಧಿಕಾರಿ ಶೋಭಾ ದೇವಾಡಿಗ, ಡಾ.ಎಸ್.ಎ.ಪಾಟೀಲ, ಡಾ.ಮನೋಜಕುಮಾರ ಹಾಗೂ ಆಯುಷ್ ವೈದ್ಯಾಧಿಕಾರಿಗಳು, ಯೋಗ ತರಬೇತುದಾರರು. ಇತರರು ಉಪಸ್ಥಿತರಿದ್ದರು.