ಹಾವೇರಿ: ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದ ವತಿಯಿಂದ 2025ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಹಾಗೂ ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಐದು ವರ್ಷಗಳ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ (31-7-2024ಕ್ಕೆ) ಮಕ್ಕಳು ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ-2025ಕ್ಕೆ ಜೂನ್ 31ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.