ಬನಶಂಕರಿ ಜಾತ್ರೆ, ನವಗ್ರಹ ಹೋಮ

6 HVR 9 A
Published on

ಹಾವೇರಿ: ಇಲ್ಲಿಯ ಶಿವಲಿಂಗ ನಗರದಲ್ಲಿರುವ ಬನಶಂಕರಿ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ದೇವಿಯ 20ನೇ ಜಾತ್ರಾ ಮಹೋತ್ಸವವು ಅದ್ಧೂರಿಯಾಗಿ ಜರುಗಿತು.
ಬೆಳಗ್ಗೆ ಬನಶಂಕರಿ ದೇವಿಗೆ ವಿಶೇಷ ಅಲಂಕಾರ, ಕುಂಕುಮಾರ್ಚನೆ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಜಾತ್ರಾ ಮಹೋತ್ಸವದ ಧ್ವಜ ಸ್ಥಾಪನೆ ನೆರವೇರಿತು. ಬನಶಂಕರಿ ಹೋಮ ಮತ್ತು ನವಗ್ರಹ ಹೋಮಗಳನ್ನು ಭಕ್ತರು ನೆರವೇರಿಸಿದರು. ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗಿತ್ತು. ಮಧ್ಯಾಹ್ನ ಬಂದ ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಸಂಜೆ ದೇಗುಲದ ಅವರಣದಲ್ಲಿ ಪಲ್ಲಕ್ಕಿ ಉತ್ಸವ ನೆರವೇರಿತು. ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net