ಸಮಗ್ರ ಕೃಷಿ, ಕುರಿ ಸಾಕಣೆ, ಹೈನುಗಾರಿಕೆ ತರಬೇತಿ

Published on

ಹಾವೇರಿ: ಇಲ್ಲಿನ ದೇವಗಿರಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿಯಲ್ಲಿ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಏ.15ರಿಂದ 13 ದಿನಗಳ ಉಚಿತ ಸಮಗ್ರ ಕೃಷಿ, ಕುರಿ ಸಾಕಣೆ ಮತ್ತು ಹೈನುಗಾರಿಕೆ ತರಬೇತಿ ಆಯೋಜಿಸಲಾಗಿದೆ.

ಜಿಲ್ಲೆಯ 18ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಬಿಪಿಎಲ್ ಕಾರ್ಡ್, ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿ, ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ, ಹಾವೇರಿ ಇಲ್ಲಿ ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net