ಹಾವೇರಿ: ದೇವಗಿರಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿಯಲ್ಲಿ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಜುಲೈ 10ರಿಂದ ಆಗಸ್ಟ್ 23ರವರೆಗೆ 45 ದಿನಗಳ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ ಆಯೋಜಿಸಲಾಗಿದೆ.
ಜಿಲ್ಲೆಯ 18ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಈ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲೆಯ ಗ್ರಾಮೀಣ ಭಾಗದ ಹಾಗೂ ರೇಷನ್ ಕಾರ್ಡ್ ಹೊಂದಿದವರಿಗೆ ಮಾತ್ರ ತರಬೇತಿಗೆ ಅವಕಾಶವಿದೆ. ಆಸಕ್ತರು ಜುಲೈ 1ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿ, ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ, ಹಾವೇರಿ ಇಲ್ಲಿ ಸಂಪರ್ಕಿಸಲು ಕೋರಲಾಗಿದೆ.