ತಡಸ ಬಳಿ ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Tadas
Published on

ಹಾವೇರಿ/ ಬಂಕಾಪುರ: ತಡಸ ತಿಮ್ಮಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು, ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ಚಂದ್ರಮ್ಮ( 59), ಚಂದ್ರಮ್ಮನ ಪುತ್ರಿ ಹರಿಹರದ ಮೀನಾ( 38), ಹರಿಹರದ ಮಹೇಶ್ ಕುಮಾರ್ ಸಿ ( 41) ಹಾಗೂ ಹರಿಹರದ ಧನವೀರ್( 11) ಮೃತಪಟ್ಟವರು.

ತಿಮ್ಮಾಪುರದ ಬಳಿ ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಳಿ ಬಣ್ಣದ ಮಹಿಂದ್ರಾ ಎಕ್ಸ್ ಯುವಿ 700 ಕಾರು ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿತ್ತು.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಟ್ರೋಜ್ ಕಾರಿಗೆ ಡಿಕ್ಕಿ ಹೊಡೆದಿದೆ.

ಅವಘಡದಲ್ಲಿ 10 ವರ್ಷದ ಬಾಲಕ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ. ಎಸ್ ಪಿ ಅಂಶುಕುಮಾರ ಹಾಗೂ ತಡಸ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿದ್ದಾರೆ. ತಡಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net