ಬಂಕಾಪುರದಲ್ಲಿ ಜಿ ಪ್ಲಸ್ 1 ಸಮುಚ್ಛಯ ಉದ್ಘಾಟನೆ 16ರಂದು

Published on

ಹಾವೇರಿ: ವಸತಿ ಇಲಾಖೆ, ರಾಜೀವ ಗಾಂಧಿ ವಸತಿ ನಿಗಮ ಹಾಗೂ ಬಂಕಾಪುರ ಪುರಸಭೆ ಸಹಯೋಗದಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಬಂಕಾಪುರ ಪಟ್ಟಣದಲ್ಲಿ ನಿರ್ಮಿಸಿರುವ ಜಿ ಪ್ಲಸ್ 1 ಮಾದರಿಯ ಮನೆಗಳ ಸಮುಚ್ಛಯ ಉದ್ಘಾಟನಾ ಸಮಾರಂಭ ಜು.16ರಂದು ಮಧ್ಯಾಹ್ನ 12.30ಕ್ಕೆ ಬಂಕಾಪುರ ಪಟ್ಟಣದ ದೇಸಾಯಿ ಪ್ಲಾಟ್‌ನಲ್ಲಿ ನಡೆಯಲಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ, ಶಿಗ್ಗಾಂವಿ- ಸವಣೂರ ಶಾಸಕ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಬವಸರಾಜ ಹೊರಟ್ಟಿ, ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಹಾಗೂ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ ಸದಸ್ಯರಾದ ಪ್ರೊ.ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಇತರರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net