ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರು

Published on

ಹಾವೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ ಮತ್ತು ಸ್ನಾತಕೋತ್ತರ ಮೂರು ವಿಭಾಗಗಳ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ಒಂಭತ್ತು ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ 4,596 ವಿದ್ಯಾರ್ಥಿಗಳು, ಪದವಿಪೂರ್ವ ವಿಭಾಗದಲ್ಲಿ 42 ವಿದ್ಯಾರ್ಥಿಗಳು ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ವಿಭಾಗದಲ್ಲಿ 32 ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ವಿಷಯ ತಜ್ಞರಿಂದ ಪ್ರಬಂಧಗಳ ಮೌಲ್ಯಮಾಪನ ಮಾಡಿಸಿ ಪ್ರತಿ ವಿಭಾಗದಲ್ಲಿ ಅತ್ಯುತ್ತಮ ಮೂರು ಪ್ರಬಂಧಗಳನ್ನು ಆಯ್ಕೆ ಮಾಡಲಾಗಿದೆ.
ಪ್ರೌಢಶಾಲಾ ವಿಭಾಗದಲ್ಲಿ ಬ್ಯಾಡಗಿ ತಾಲೂಕು ಗುಂಡೇನಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಸೃಷ್ಟಿ ಬ. ಪಾಟೀಲ ಪ್ರಥಮ, ಶಿಗ್ಗಾಂವಿ ತಾಲೂಕು ಬಂಕಾಪುರ ದಿ.ಮಾರ್ಡನ್ ಇಂಗ್ಲೀಷ್ ಸ್ಕೂಲ್‌ನ ವಿದ್ಯಾರ್ಥಿ ಬಸವರಾಜ ಹೊಳೆಕೋಟಿ ದ್ವಿತೀಯ ಹಾಗೂ ನೀರಲಗಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಕವನಾ ಮಸಳಿ ತೃತೀಯ ಬಹುಮಾನ ಪಡೆದಿದ್ದಾರೆ.
ಪದವಿಪೂರ್ವ ವಿಭಾಗದಲ್ಲಿ ಹಾನಗಲ್‌ನ ರೈಟ್ ಗೈಡನ್ಸ್ ಪಿಯು ಸೈನ್ಸ್ ಕಾಲೇಜ್ ವಿದ್ಯಾರ್ಥಿ ಸಬಿಯಾಬಾನು ಖಾಜಿ ಪ್ರಥಮ, ರಟ್ಟಿಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿ ಅಭಿಷೇಕ ಕಮ್ಮಾರ ದ್ವಿತೀಯ ಹಾಗೂ ರಾಣೆಬೆನ್ನೂರಿನ ರಾಜರಾಜೇಶ್ವರಿ ಹೆಣ್ಣು ಮಕ್ಕಳ ಪಿಯು ಕಾಲೇಜು ವಿದ್ಯಾರ್ಥಿನಿ ಕಾವ್ಯ ಎಚ್.ಕೊಪ್ಪನವರ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಪದವಿ ಹಾಗೂ ಸ್ನಾತಕೋತ್ತರ ಪದವಿ ಭಾಗದಲ್ಲಿ ಹಾವೇರಿ ಗಾಂಧಿಪುರ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಜಯಶ್ರೀ ಎಸ್.ಟಿ. ಪ್ರಥಮ, ರಾಣೆಬೆನ್ನೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಪಿ.ಹಲವಾಗಲ ಹಾಗೂ ಹಿರೆಕೆರೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪ್ರಣತಿ ಶಿ.ಹಾದ್ರಿಹಳ್ಳಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ವಾರ್ತಾಧಿಕಾರಿ ಭಾರತಿ ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ.2ರಂದು ಬಹುಮಾನ ವಿತರಣೆ
ಅಕ್ಟೋಬರ್ 2ರಂದು ಗುರುಭವನದಲ್ಲಿ ನಡೆಯುವ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರತಿ ವಿಭಾಗದಲ್ಲಿ ಪ್ರಥಮವಾಗಿ ಮೂರು ಸಾವಿರ ರೂ., ಎರಡನೇ ಬಹುಮಾನವಾಗಿ ಎರಡು ಸಾವಿರ ರೂ. ಹಾಗೂ ಮೂರನೇ ಬಹುಮಾನವಾಗಿ ತಲಾ ಒಂದು ಸಾವಿರ ರೂ. ನಗದು, ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net