ಬರ ಪಟ್ಟಿಯಿಂದ ಕೈಬಿಟ್ಟದ್ದು ನೋವಿನ ಸಂಗತಿ

Published on

ಹಾವೇರಿ: ಜಿಲ್ಲೆಯ ಮೂರು ತಾಲೂಕುಗಳನ್ನು ಬರಗಾಲದ ಪಟ್ಟಿಯಿಂದ ಕೈಬಿಟ್ಟಿರುವುದು ಬಹಳ ನೋವಿನ ಸಂಗತಿಯಾಗಿದೆ. ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲ ಉಂಟಾಗಿದ್ದು, ಇದರಿಂದ ಎಲ್ಲ ತಾಲೂಕುಗಳ ರೈತರೂ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಐದು ತಾಲೂಕುಗಳನ್ನು ಬರಗಾಲ ಪಟ್ಟಿಗೆ ಸೇರಿಸಿ ಮೂರು ತಾಲೂಕುಗಳನ್ನು ಕೈಬಿಟ್ಟಿರುವುದು ಎಷ್ಟು ಸರಿ. ಈ ಕೂಡಲೇ ಸರ್ಕಾರ ಉಳಿದ ಮೂರೂ ತಾಲೂಕುಗಳನ್ನು ಪಟ್ಟಿಗೆ ಸೇರಿಸಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net