ಹಾವೇರಿ: ತಾಲೂಕಿನ ಬಸಾಪುರ ಗ್ರಾಮದ ವಿದ್ಯಾರ್ಥಿ ರೋಹಿತ ಮಹಾಂತೇಶ ತಳವಾರ ನವೋದಯ ಪರೀಕ್ಷೆಯಲ್ಲಿ ಪಾಸಾಗಿ, ನವೋದಯ ಶಾಲೆಗೆ ಆಯ್ಕೆಯಾಗಿದ್ದಾನೆ.
ರೋಹಿತ ಗ್ರಾಮದ ಶ್ರೀ ಪರಮೇಶ್ವರ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಯ ಮುಖ್ಯೋಪಾಧ್ಯಾಯರು, ಎಸ್‌ಡಿಎಂಸಿ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.