ವಿವಿಧ ತರಬೇತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವತಿಯರಿಗೆ ನವೆಂಬರ್‌ನಲ್ಲಿ ಉಚಿತವಾಗಿ ಬ್ಯೂಟಿ ಪಾರ್ಲರ್ ಮ್ಯಾನೇಜಮೆಂಟ್ ಹಾಗೂ ಹೊಲಿಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ.

ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅ.31ರೊಳಗಾಗಿ ಹೆಸರು, ವಿಳಾಸ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಂಪಕ್ಸಿಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net