ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳ 26ರಿಂದ

Published on

ಹಾವೇರಿ: ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮತ್ತು ರಾಜ್ಯದ ಎಲ್ಲ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ ಮಧ್ಯಮ/ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ.
ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರುhttps://skillconnect.
kaushalkar.com ನಲ್ಲಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 1800-599-9918 ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net