ಹಾವೇರಿ: ವಿಕಲಚೇತನ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರೀಸ್ ಆ್ಯಂಡ್ ಕಾರ್ಮಸ್(ಬಿಸಿಐಸಿ) ಹಾಗೂ ಇತರೆ ಸಂಸ್ಥೆಗಳ ಸಹಯೋಗದಲ್ಲಿ ಜೂ.22ರಂದು ಬೆಳಗ್ಗೆ 9 ಗಂಟೆಯಿಂದ ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಲಕ್ಷ್ಮೀ ಕಾಲೇಜ್ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಮೇಳದಲ್ಲಿ ವಿವಿಧ ಸಂಸ್ಥೆಗಳು ಹಾಗೂ ವಾಣಿಜ್ಯ ಕೈಗಾರಿಕೆಗಳು ಪಾಲ್ಗೊಳ್ಳುತ್ತಿದ್ದು, ಉದ್ಯೋಗಾಕಾಂಕ್ಷಿ ಅರ್ಹ ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.