

ಹಾವೇರಿ: ಧಾರವಾಡ ಕೃಷಿ ವಿಶ್ವವಿದ್ಯಾಲಯ ವತಿಯಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತ ಹಾಗೂ ರೈತ ಮಹಿಳೆಯರಿಂದ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ಜಿಲ್ಲೆಗೆ ಒಬ್ಬರಂತೆ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆಯನ್ನು ಗುರುತಿಸಿ ಸೆಪ್ಟೆಂಬರ್‌ನಲ್ಲಿ ಜರುಗುವ ಕೃಷಿಮೇಳ 2024ರಲ್ಲಿ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಆಸಕ್ತ ರೈತ, ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಹನುಮನಮಟ್ಟಿ ಕಚೇರಿಯಿಂದ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಜುಲೈ 15ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಹನುಮನಮಟ್ಟಿ (ದೂ.ಸಂ. 08373-253524) ಇವರನ್ನು ಸಂಪರ್ಕಿಸಬಹುದು.