ಹಾವೇರಿ: ಭದ್ರಾ ಜಲಾಶಯದಿಂದ ಕುಡಿಯಲು ಹಾಗೂ ಬೆಳೆ ಸಂರಕ್ಷಣೆಗಾಗಿ ಏ.1ರಿಂದ 8,000 ಕ್ಯೂಸೆಕ್ ನೀರನ್ನು ಭದ್ರಾ ನದಿಯ ಮೂಲಕ ನೀರನ್ನು ಹರಿಸಲಾಗುತ್ತಿದೆ.
ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ಜಾನುವಾರು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ನದಿಯಿಂದ ಅನಧಿಕೃತವಾಗಿ ವಿದ್ಯುತ್ ಪಂಪ್-ಡಿಸೆಲ್ ಪಂಪ್‌ಸೆಟ್ ಮತ್ತು ಟ್ಯಾಂಕರ್‌ಗಳ ಮೂಲಕ ನೀರು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ನದಿ ಪಾತ್ರದಿಂದ ಸಾರ್ವಜನಿಕರು ಮತ್ತು ರೈತರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕ.ನೀ.ನಿ.ನಿ. ಭದ್ರಾ ಯೋಜನಾ ವೃತ್ತದ ಬಿ.ಆರ್ ಪ್ರಾಜೆಕ್ಟ್ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಅಭಿಯಂತರರ ಕಚೇರಿ ಪ್ರಕಟಣೆ ತಿಳಿಸಿದೆ.