ಭಾಗ್ಯಲಕ್ಷ್ಮೀ ಯೋಜನೆ ಮೊತ್ತದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ಜನಿಸಿದ (ಏಪ್ರಿಲ್-2006ರಿಂದ ಮಾರ್ಚ್-2007) ಹಾಗೂ ಎಲ್‌ಐಸಿ ಬಾಂಡ್ ಪಡೆದು 18 ವರ್ಷ ಪೂರ್ಣಗೊಂಡ ಹಾವೇರಿ ತಾಲೂಕಿನ ಅರ್ಹ ಫಲಾನುಭವಿಗಳು ಪರಿಪಕ್ವ ಮೊತ್ತಕ್ಕೆ ದಿನಾಂಕ 31-10-2025ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಬಾಕಿ ಇರುವ ಫಲಾನುಭವಿಗಳು ಈ ಕೂಡಲೇ ಹಾವೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಆಗಮಿಸಿ ಅರ್ಜಿ ಸಲ್ಲಿಸಬೇಕು ಎಂದು ಹಾವೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net