

ಹಾವೇರಿ: ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಘಡ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದಿರುವುದು ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ವಕೀಲ ಶರಣು ಅಂಗಡಿ ಅಭಿಪ್ರಾಯಪಟ್ಟಿದ್ದಾರೆ.
ದೇಶದ ಹಿತ ಕಾಯುವುದು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಎಂಬ ಸತ್ಯ ಜನರಿಗೆ ಅರಿವಾಗಿದೆ. ಸುಳ್ಳು ಗ್ಯಾರಂಟಿಗಳ ಆಧಾರದಲ್ಲಿ ಎಲ್ಲೆಡೆ ಗೆಲ್ಲಬಹುದು ಎಂದು ಕಾದು ಕುಳಿತಿದ್ದ ಕಾಂಗ್ರೆಸ್‌ಗೆ ಈ ಫಲಿತಾಂಶದಿಂದ ನಿರಾಶೆಯಾಗಿದೆ. ಮೋದಿ ಅವರ ಗ್ಯಾರಂಟಿ ಮುಂದೆ ಯಾವ ಗ್ಯಾರಂಟಿಯೂ ನಡೆಯುವುದಿಲ್ಲ ಎಂಬುದು ಈ ಮೂಲಕ ಸಾಬೀತಾಗಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳಲಿದೆ ಎಂದು ಶರಣು ಅಂಗಡಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.