ಹಿರೇಕೆರೂರ ಕ್ಷೇತ್ರದಲ್ಲಿ ಬೊಮ್ಮಾಯಿ ಪ್ರಚಾರ ಏ.2ರಂದು

Bommai
Published on

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಏ.2ರಂದು ಹಿರೇಕೆರೂರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10.45ಕ್ಕೆ ಹಾವೇರಿಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಹಿರೇಕೆರೂರ ಕ್ಷೇತ್ರದ ಮಡ್ಲೂರ, ಮಧ್ಯಾಹ್ನ 1 ಗಂಟೆಗೆ ಚಿಕ್ಕೇರೂರ, 2.30ಕ್ಕೆ ಅಬಲೂರ, ಸಂಜೆ 4ಕ್ಕೆ ದೂದಿಹಳ್ಳಿ, ಸಂಜೆ 5.30ಕ್ಕೆ ಶಿರಗಂಬಿ, ರಾತ್ರಿ 7ಕ್ಕೆ ಕುಂಚೂರ ಗ್ರಾಮದಲ್ಲಿ ಪ್ರಚಾರ ನಡೆಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net