ಬಿ.ವೈ.ವಿಜಯೇಂದ್ರ ಹಾವೇರಿಗೆ ಫೆ.1ರಂದು

BY Vijayendra
Published on

ಹಾವೇರಿ: ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಫೆ.1ರಂದು ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ತೋಟದ ಯಲ್ಲಾಪುರದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಸ್ವಾಗತಿಸಲಾಗುವುದು. ಬೃಹತ್ ಬೈಕ್ ರ‌್ಯಾಲಿ ಮೂಲಕ ಕೆಇಬಿ ಕಚೇರಿ ವೃತ್ತದ ಮಾರ್ಗವಾಗಿ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ತೆರಳಿ ಹೊಸಮನಿ ಸಿದ್ದಪ್ಪ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ಎಂಜಿ ರಸ್ತೆ ಮಾರ್ಗವಾಗಿ ಹುಕ್ಕೇರಿ ಮಠದ ಶಿವಬಸವೇಶ್ವರ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ಸಾಗಿ, ನಂತರ ಅಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾ ಘಟಕ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net