ಸವಣೂರಲ್ಲಿ ಪ್ಯಾಲೆಸ್ತೇನ್ ಧ್ವಜ ಹಾರಿಸಿದ್ದು ಖಂಡನೀಯ; ಕ್ರಮ ಜರುಗಿಸದಿದ್ದರೆ ಹೋರಾಟ, ಬಿಜೆಪಿ ಜಿಲ್ಲಾಧ್ಯಕ್ಷ ಬಳ್ಳಾರಿ ಎಚ್ಚರಿಕೆ

Virupakshappa Ballary 2
Published on

ಹಾವೇರಿ: ಜಿಲ್ಲೆಯ ಸವಣೂರಿನಲ್ಲಿ ಮುಸ್ಲಿಂ ಕಿಡಿಗೇಡಿಗಳು ಪ್ಯಾಲೆಸ್ತೇನ್ ಧ್ವಜ ಹಾರಿಸಿದ್ದು ಅತ್ಯಂತ ಖಂಡನೀಯ. ಈ ದ್ರೋಹಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ ತಕ್ಷಣವೇ ಬಂಧಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಅನ್ಯಕೋಮಿನ ಯುವಕರು ಕಲ್ಲು ತೋರಾಟ ನಡೆಸಿ ಗಣಪತಿಯ ಮೆರವಣಿಗೆಯಲ್ಲಿ ಅಮಾನವೀಯತೆ ಮೆರೆದಿದ್ದಾರೆ. ಸವಣೂರ ಪಟ್ಟಣದಲ್ಲಿ ಪ್ಯಾಲೆಸ್ತೇನ್ ಧ್ವಜ ಹಾರಿಸಿದ್ದಾರೆ. ಭದ್ರಾವತಿಯಲ್ಲಿ ಈದ್ ಮೀಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬಂದಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಮತ ಬ್ಯಾಂಕಿಗಾಗಿ ರಾಜ್ಯದ ಅಲ್ಪಸಂಖ್ಯಾಂತರನ್ನು ಓಲೈಸುತ್ತಿದೆ. ಇದರ ಪರಿಣಾಮವಾಗಿ ರಾಜ್ಯದಲ್ಲಿರುವ ಅಲ್ಪಸಂಖ್ಯಾತ ಗೂಂಡಾಗಳಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಯಾವುದೇ ಗೌರವ ಹಾಗೂ ಭಯ ಉಳಿದಿಲ್ಲ. ಆದ್ದರಿಂದ ಈ ಗೂಂಡಾಗಳು ಸಮಾಜದಲ್ಲಿ ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದಕ್ಕೆಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರದ ರಾಜಕೀಯ ನೀತಿ ಕಾರಣ.

ಸವಣೂರ ಪ್ಯಾಲೆಸ್ತೇನ್ ಧ್ವಜ ಹಾರಿಸಿದ ಪ್ರಕರಣದಲ್ಲಿ ಪೋಲಿಸ್ ಇಲಾಖೆ ಆರೋಪಿಗಳನ್ನು ಬಂಧಿಸದೇ, ನೆಪ ಮಾತ್ರಕ್ಕೆ ನೋಟಿಸ್ ಕೊಟ್ಟಿದೆ. ಇದನ್ನು ಗಮನಿಸಿದರೆ ಪೊಲೀಸ್ ಇಲಾಖೆ ಕಾಂಗ್ರೆಸ್ ಪಕ್ಷದ ಅಂಗವಾಗಿ ಕೆಲಸ ಮಾಡುತ್ತಿದೆ ಎಂಬುದು ಕಂಡು ಬರುತ್ತಿದೆ. ಪೊಲೀಸರು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಬಿಜೆಪಿಯಿಂದ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net