ಬಿಜೆಪಿಯಿಂದ ಚಿತ್ರಕಲಾ ಸ್ಪರ್ಧೆ ನಾಳೆ

Published on

ಹಾವೇರಿ: ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನ, ಗಾಂಧೀಜಿ ಮತ್ತು ಲಾಲ್ ಬದಾದೂರ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಸೆ.27ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ವಿಕಸಿತ ಭಾರತ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ.

ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣಾ ವ್ಯವಸ್ಥೆ, ಆಪರೇಷನ್ ಸಿಂಧೂರ, ವಂದೇ ಭಾರತ, ಕೃಷಿ ಸುಧಾರಣೆ ವಿಷಯಗಳ ಕುರಿತು ಚಿತ್ರಕಲೆ ಪ್ರಸ್ತುತಪಡಿಸಬಹುದು. ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. 17ರಿಂದ 25 ವರ್ಷದವರು, ತಮ್ಮ ಸಾಮಗ್ರಿಗಳನ್ನು ತಾವೇ ತರಬೇಕು. ಪ್ರವೇಶ ಶುಲ್ಕ ಇರುವುದಿಲ್ಲ. 90 ನಿಮಿಷ ಕಾಲಾವಧಿ ನೀಡಲಾಗುವುದು. ಎಲ್ಲರಿಗೂ ಪ್ರಮಾಣ ಪತ್ರ ವಿತರಿಸಲಾಗುವುದು. ಆಧಾರ್ ಕಾರ್ಡ್ ಕಡ್ಡಾಯ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net