ಕಾಂಗ್ರೆಸ್ ಧ್ವಜ ಹಿಡಿದ ಮಾಜಿ ಶಾಸಕ ನೆಹರು ಓಲೇಕಾರ

1 HVR 6
Published on

ಹಾವೇರಿ: ಯಾದಗಿರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಬಿಜೆಪಿ ಪಕ್ಷದ ಮಾಜಿ ಶಾಸಕ ನೆಹರು ಓಲೇಕಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪಕ್ಷದ ಶಾಲು ಹಾಕಿ, ಕಾಂಗ್ರೆಸ್ ಧ್ವಜ ಕೊಟ್ಟು ಪಕ್ಷಕ್ಕೆ ಸ್ವಾಗತಿಸಿದರು.
ಬಿಎಸ್‌ವೈ ಆಪ್ತ ಎನಿಸಿಕೊಂಡಿದ್ದ ನೆಹರು ಓಲೇಕಾರಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿತ್ತು. ಗವಿಸಿದ್ದಪ್ಪ ದ್ಯಾಮಣ್ಣನವರಗೆ ಟಿಕೆಟ್ ದೊರೆತಿತ್ತು. ಇದರಿಂದ ಬೇಸರಗೊಂಡಿದ್ದ ನೆಹರು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಬಿಜೆಪಿಗೆ ಮರಳುತ್ತಾರೆಂಬ ಚರ್ಚೆ ನಡೆದಿತ್ತು. ಇದಕ್ಕೆ ಬಿಜೆಪಿಯ ಕೆಲ ಪ್ರಮುಖರು ವಿರೋಧ ವ್ಯಕ್ತಪಡಿಸಿದ್ದರು. ಈ ನಡುವೆ ನೆಹರು ಇದೀಗ ಬಿಜೆಪಿಗೆ ಕೈಕೊಟ್ಟು ಹಸ್ತಲಾಘವ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net