ಬಿಜೆಪಿಯಿಂದ ಹರ್ ಘರ್ ತಿರಂಗಾ ಅಭಿಯಾನ ಆ.13ರಿಂದ 15ರವರೆಗೆ

12 HVR 7
Published on

ಹಾವೇರಿ: 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಪೂರ್ವಭಾವಿ ಸಭೆ ಜರುಗಿತು.
ಆ.13ರಿಂದ 15ರವರೆಗೆ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮ ನಿಮಿತ್ಯ ಬೈಕ್ ರ‌್ಯಾಲಿ ಆಯೋಜಿಸಬೇಕು. ಎಲ್ಲ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು. ಜತೆಗೆ ಎಲ್ಲ ದಾರ್ಶನಿಕರ ಪುತ್ಥಳಿಗಳನ್ನು ಸ್ವಚ್ಛಗೊಳಿಸುವ ಮುಖಾಂತರ 77ನೇ ಸ್ವಾತಂತ್ರತ್ಯೋತ್ಸವ ಆಚರಿಸಬೇಕೆಂದು ಎಲ್ಲ ಮಂಡಲ ಅಧ್ಯಕ್ಷರು, ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷರು ಸೂಚಿಸಿದರು.
ರಾಜ್ಯ ಪ್ರಕೋಷ್ಠಗಳ ಸಹ ಸಂಯೋಜಕ ಭೋಜರಾಜ ಕರೂದಿ ಮಾತನಾಡಿ, ಪಕ್ಷದ ಸಂಘಟನೆ ಕುರಿತು ಹಾಗೂ ರಾಜ್ಯ ಘಟಕದ ನಿರ್ದೇಶನದಂತೆ ಕಾರ್ಯಕ್ರಮಗಳ ಆಯೋಜನೆ ಕುರಿತು ವಿವರಿಸಿದರು. ಆ.15ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾ ಕಾರ್ಯಾಲಯದಲ್ಲಿ ಧ್ವಜಾರೋಹಣ ಆಚರಿಸಲಿದ್ದು, ಎಲ್ಲರೂ ಭಾಗವಹಿಸುವಂತೆ ಕರೆ ನೀಡಿದರು.
ಅಭಿಯಾನದ ಸಂಚಾಲಕ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಗಾಣಿಗೇರ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಂಜುಂಡೇಶ ಕಳ್ಳೇರ, ಸಂತೋಷ ಆಲದಕಟ್ಟಿ, ರಾಜ್ಯ ಓಬಿಸಿ ಮೋರ್ಚಾ ಕಾರ್ಯದರ್ಶಿ ಸುಭಾಷ ಚವ್ಹಾಣ, ಜಿಲ್ಲಾ ವಕ್ತಾರ ನಿರಂಜನ ಹೇರೂರ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net