ಬಿಜೆಪಿ ಜನಸಭಾ ಸಮಾವೇಶ ನಾಳೆ; ಮೋಟೆಬೆನ್ನೂರಿನಲ್ಲಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಆಯೋಜನೆ

Published on

ಹಾವೇರಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷದ ಸಾಧನೆ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಜೂ.24ರಂದು ಮಧ್ಯಾಹ್ನ 3 ಗಂಟೆಗೆ ಬ್ಯಾಡಗಿ ತಾಲೂಕು ಮೋಟೆಬೆನ್ನೂರಿನ ಬಳ್ಳಾರಿ ರುದ್ರಪ್ಪ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜನಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಂವಿಧಾನ ಬಾಹಿರವಾಗಿ ಜನರಿಗೆ ಆಮಿಷಗಳನ್ನು ತೋರಿಸಿ ಜಯಗಳಿಸಿದೆ. ಇದರಿಂದ ಬಿಜೆಪಿ ಕಾರ್ಯಕರ್ತರು ತೀರ್ವ ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಕಾರ್ಯಕರ್ತರೊಂದಿಗೆ ವಿಚಾರ ವಿನಿಮಯ ನಡೆಸಲು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ವಿವಿಧ ಕಾಯ್ದೆಗಳನ್ನು ರದ್ದು ಮಾಡಿರುವದರ ಕುರಿತು. 10 ಕೆ.ಜಿ ಅಕ್ಕಿಯ ಸತ್ಯಾಂಶದ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಡಾ.ಸಿ.ಎನ್. ಅಶ್ವಥ ನಾರಾಯಣ, ಬಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ, ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ, ಶಿವರಾಜ ಸಜ್ಜನರ, ಮುಂಖಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net