

ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬುಧವಾರ ಬಿಜೆಪಿ ನಗರ ಮಂಡಳ ಘಟಕದಿಂದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಮೇಣದ ಬತ್ತಿ ಹಚ್ಚಿ ಶ್ರದ್ದಾಂಜಲಿ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ವೆಂಕಟೇಶ ನಾರಾಯಣಿ, ವಿಜಯಕುಮಾರ ಚಿನ್ನಿಕಟ್ಟಿ, ರುದ್ರೇಶ ಚಿನ್ನಣ್ಣನವರ, ಗುಡ್ಡಪ್ಪ ಭರಡಿ, ಜಗದೀಶ ಕನವಳ್ಳಿ, ನಾಗರಾಜ ಹರಿಗೋಲ, ಲಲಿತಾ ಗುಂಡೇನಹಳ್ಳಿ, ಚನ್ನಮ್ಮ ಬ್ಯಾಡಗಿ, ಕವಿತಾ ಯಲವಗಿಮಠ, ಇತರರಿದ್ದರು.