ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಬೊಮ್ಮಾಯಿ ಚಾಲನೆ

8 HVR 5
Published on

ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಭಾನುವಾರ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವರಿಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಕಾರ್ಡ್‌ಗಳನ್ನು ವಿತರಿಸುವ ಮೂಲಕ ಜಿಲ್ಲಾ ಸದಸ್ಯತ್ವ ಅಭಿಯಾನಕ್ಕೆ ಜಾಲನೆ ನೀಡಿದರು.
ನಂತರ ಮಾತನಾಡಿದ ಬೊಮ್ಮಾಯಿ, ದೇಶದಲ್ಲಿ ಸೆ.2ರಂದು ಪ್ರಧಾನಿ ನರೇಂದ್ರ ಮೋದಿಯವರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕನಿಷ್ಠ 9 ಲಕ್ಷ ಸದಸ್ಯತ್ವ ಮಾಡುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಢಳಿತದಿಂದ ಜನರು ಬೆಸತ್ತಿದ್ದಾರೆ. ಸಮಾಜದ ಸರ್ವಾಂಗೀಣ ಅಭಿವೃದ್ದಿಗೆ ಬಿಜೆಪಿ ಮಾತ್ರ ಪರಿಹಾರ. ಆದ್ದರಿಂದ ಹೆಚ್ಚಿನ ಜನರು ಸದಸ್ಯತ್ವ ಪಡೆದು ಮುಂಬರುವ ದಿನಗಳಲ್ಲಿ ಬಿಜೆಪಿಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಹಾಗೂ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ನಗರದ ಆಟೋ ಚಾಲಕರಿಗೆ, ಸಮಗಾರರಿಗೆ, ಬೀದಿಬದಿ ಹಣ್ಣು - ಹಂಪಲು ಮಾರಾಟಗಾರರಿಗೆ, ಹೋಟಲ್ ಮಾಣಿಗಳಿಗೆ ಸದಸ್ಯತ್ವ ಕಾರ್ಡ್ ವಿತರಿಸಿದರು.
ಮಾಜಿ ಶಾಸಕರಾದ ಶಿವರಾಜ ಸಜ್ಜನರ, ವಿರುಪಾಕ್ಷಪ್ಪ ಬಳ್ಳಾರಿ, ಹಾವೇರಿ ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಅಭಿಯಾನದ ಜಿಲ್ಲಾ ಸಂಚಾಲಕ ಮಂಜುನಾಥ ಗಾಣಿಗೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಂಜುಂಡೇಶ ಕಳ್ಳೇರ, ಡಾ.ಸಂತೋಷ ಆಲದಕಟ್ಟಿ, ಕಾರ್ಯಕರ್ತರು, ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net