ಹಸಿರು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಿ; ರಾಜ್ಯ ಸರ್ಕಾರಕ್ಕೆ ಬಿಜೆಪಿ ಜಿಲ್ಲಾ ಘಟಕ ಆಗ್ರಹ

22 HVR 7
Published on

ಹಾವೇರಿ: ಜಿಲ್ಲೆಯನ್ನು ಹಸಿರು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಲಾಯಿತು.
ಜುಲೈನಲ್ಲಿ ವಿಪರೀತ ಮಳೆ ಸುರಿದರೂ ಆಗಸ್ಟ್‌ನಲ್ಲಿ ಮಳೆ ಕೈಕೊಟ್ಟಿದೆ. ಪರಿಣಾಮ ಬೆಳೆ ಎಲ್ಲ ಒಣಗುತ್ತಿದೆ. ಹಾಗಾಗಿ, ಜಿಲ್ಲೆಯನ್ನು ಹಸಿರು ಬರಗಾಲವೆಂದು ಘೋಷಿಸಬೇಕು. ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಳ್ಳತನ ಹಾಗೂ ಹಾಳಾಗುತ್ತಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಮಾಜಿ ಸಚಿವ ಬಿ.ಸಿ. ಪಾಟೀಲ, ಮಾಜಿ ಶಾಸಕ ಶಿವರಾಜ ಸಜ್ಜನರ, ಗವಿಸಿದ್ದಪ್ಪ ದ್ಯಾಮಣ್ಣವರ, ಶಶಿಧರ ಹೊಸಳ್ಳಿ, ಕೃಷ್ಣ ಈಳಗೇರ, ಪಾಲಾಕ್ಷಗೌಡ ಪಾಟೀಲ, ಡಾ.ಬಸವರಾಜ ಕೇಲಗಾರ, ಕೆ.ಶಿವಲಿಂಗಪ್ಪ, ಭಾರತಿ ಜಂಬಗಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net