

ಹಾವೇರಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ಹಮ್ಮಿಕೊಂಡಿದ್ದ ದೇಶದ ವಿವಿಧ ಕಿಸಾನ್ ಸಮೃದ್ಧಿ ಕೇಂದ್ರಗಳ ಉದ್ಘಾಟನೆ ಸಮಾರಂಭದ ವರ್ಚುಯೆಲ್ ಕಾರ್ಯಕ್ರಮದಲ್ಲಿ ಹಾವೇರಿಯ ಆಗ್ರೋ ಕೇಂದ್ರವೊಂದರಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಬಿಜೆಪಿ ಜಿಲ್ಲಾದ್ಯಕ್ಷ ಸಿದ್ದರಾಜ ಕಲಕೋಟಿ, ಮಾಜಿ ಶಾಸಕ ಶಿವರಾಜ ಸಜ್ಜನರ, ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣವರ, ಶಶಿಧರ ಹೊಸಳ್ಳಿ, ರುದ್ರೇಶ ಚಿನ್ನಣ್ಣನವರ, ರಮೇಶ ಪಾಲನಕರ, ಕರಬಸಪ್ಪ ಹಳದೂರ, ವಿಜಯ ಕುಮಾರ ಚಿನ್ನಿಕಟ್ಟಿ, ಅಲ್ಲಾಭಕ್ಷ ತಿಮ್ಮಾಪುರ, ಇತರರಿದ್ದರು.