ನಾನು ಹಾವೇರಿ ಲೋಕಸಭೆ ಬಿಜೆಪಿ ಟಿಕೆಟ್ ಆಕಾಂಕ್ಷಿ

BJP
Published on

ಹಾವೇರಿ: ಮುಂಬರುವ ಲೋಕಸಭೆ ಚುನಾವಣೆಗೆ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದು, ನಾನು ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಪಾಲಾಕ್ಷಗೌಡ ಪಾಟೀಲ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಶಿವಕುಮಾರ ಉದಾಸಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. 2024ರ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಅವರೇ ಹೇಳಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ಪುತ್ರ ಕಾಂತೇಶ ಅವರು ಹಾವೇರಿ ಎಂಪಿ ಟಿಕೆಟ್ ಕೇಳಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್ಲೂ ಟಿಕೆಟ್ ಕೇಳುವಂಥ ನಾಯಕತ್ವ ಈಶ್ವರಪ್ಪ ಅವರಲ್ಲಿದೆ. ಅವರು ನನಗೂ ನಾಯಕರೇ. ಆದರೆ, ಈ ಬಾರಿ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದರು.
ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ 9 ವರ್ಷಗಳ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಅಭಿಯಾಣ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗಂಗಾಧರ ಮಲೆಬೆನ್ನೂರ, ಕೋಟೇಶ ಕಂಬಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net