

ಹಾವೇರಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ನಶಾಮುಕ್ತ ಭಾರತದ ಸಂಕಲ್ಪದೊಂದಿಗೆ ಆತ್ಮನಿರ್ಭರ ಭಾರತಕ್ಕಾಗಿ ಜಿಲ್ಲಾ ಬಿಜೆಪಿ ಘಟಕದಿಂದ ನಗರದ ಎಂ.ಜಿ ರಸ್ತೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ನಮೋ ರನ್ ಮ್ಯಾರಾಥಾನ್ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಬಿ.ಸಿ.ಪಾಟೀಲರು ಸೇರಿ ಹಲವರು ಯುವಕರೊಂದಿಗೆ ಓಡುವ ಮೂಲಕ ಉತ್ಸಾಹ ತುಂಬಿದರು.
ನಗರದ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಶನಿವಾರ ಬೆಳಗ್ಗೆ ನಮೋ ಯುವ ರನ್ ಮ್ಯಾರಾಥಾನ್ ಆರಂಭವಾಯಿತು. ಕಿತ್ತೂರ ರಾಣಿ ಚನ್ನಮ್ಮ ವೃತ್ತ, ಹೊಸಮನಿ ಸಿದ್ದಪ್ಪ ವೃತ್ತ, ಎಂ.ಎಂ ವೃತ್ತ ಮಾರ್ಗವಾಗಿ ಸಂಚರಿಸಿ ಎಂ.ಜಿ ವೃತ್ತ ತಲುಪಿತು. ವಿವಿಧ ಕಾಲೇಜ್ ವಿದ್ಯಾರ್ಥಿಗಳು, ಬಿಜೆಪಿ ಮುಖಂಡರು, ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಬಿ.ಸಿ.ಪಾಟೀಲರು ಸೇರಿ ಹಲವರು ಯುವಕರೊಂದಿಗೆ ಓಡುವ ಮೂಲಕ ಉತ್ಸಾಹ ತುಂಬಿದರು.