

ಹಾವೇರಿ: ಭಾರತೀಯ ಜನತಾ ಪಕ್ಷ (ಬಿಜೆಪಿ)ದ ನೂತನ ಜಿಲ್ಲಾ ಅಧ್ಯಕ್ಷರಾಗಿ ಮಾಜಿ ಶಾಸಕ, ಮಾಜಿ ಜಿಪಂ ಸದಸ್ಯ ವಿರುಪಾಕ್ಷಪ್ಪ ಬಳ್ಳಾರಿ ಆಯ್ಕೆ ಮಾಡಿ ರಾಜ್ಯ ಬಿಜೆಪಿ ಬುಧವಾರ ಆದೇಶ ಹೊರಡಿಸಿದೆ. ಮೋಟೆಬೆನ್ನೂರ ಮೂಲದ ವಿರುಪಾಕ್ಷಪ್ಪ ಬಳ್ಳಾರಿ ಮೊದಲಿಗೆ ಮೋಟೆಬೆನ್ನೂರ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಕಳೆದ ಬಾರಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಸದಸ್ಯ(ಎಂಎಲ್‌ಎ)ರಾಗಿ ಆಯ್ಕೆಯಾಗಿದ್ದರು. ಜಿಲ್ಲಾಧ್ಯಕ್ಷರ ಬದಲಾವಣೆಯ ಕೂಗು ಕೇಳಿ ಬಂದ ಬೆನ್ನಲ್ಲೇ ವಿರುಪಾಕ್ಷಪ್ಪ ಬಳ್ಳಾರಿ ಅವರನ್ನು ಆಯ್ಕೆ ಮಾಡಿ ರಾಜ್ಯ ಚುನಾವಣಾಧಿಕಾರಿ ಕ್ಯಾ.ಗಣೇಶ ಕಾರ್ಣಿಕ ಆದೇಶ ಹೊರಡಿಸಿದ್ದಾರೆ.